ಕರ್ನಾಟಕ ಸರ್ಕಾರದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡಲಾಗುವ ರಾಷ್ಟ್ರೀಯ ಸೇವಾ ಯೋಜನೆಯ ೨೦೧೨-೧೩ರ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಹರೀಶ್ ಆಚಾರ್ಯ ಹಾಗೂ ರಾಜ್ಯಮಟ್ಟದ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸ್ತಿಗೆ ಸುರತ್ಕಲ್‌ನ ಗೋವಿಂದ ದಾಸ ಕಾಲೇಜು ಆಯ್ಕೆಯಾಗಿದೆ.
ಅಕ್ಟೋಬರ್ ೨೮ ರಂದು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹರೀಶ್ ಆಚಾರ್ಯ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ಹಾಗೂ ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ. ರಾಜಮೋಹನ ರಾವ್‌ರವರು ರಾಜ್ಯಮಟ್ಟದ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನಾ ಘಟಕ ಪ್ರಶಸಿಯನ್ನು ಕರ್ನಾಟಕ ರಾಜ್ಯದ ರಾಜ್ಯಪಾಲ ಹಂಸರಾಜ್ ಭಾರದ್ವಜ್ ಅವರಿಂದ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ. ಅಭಯಚಂದ್ರ, ಕಾರ್ಯದರ್ಶಿ ಡಾ ಎನ್. ನಾಗಾಂಬಿಕಾದೇವಿ, ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯ ಕುಲಪತಿ ಡಾ. ಶ್ರೀಪ್ರಕಾಶ್, ರಾಷ್ಟ್ರೀಯ ಸೇವಾ ಯೋಜನಾ ಸಂಪರ್ಕ ಅಧಿಕಾರಿ ಡಾ. ಧನಂಜಯ ಉಪಸ್ಥಿತರಿದ್ದರು.